BengaluruCrime

ಬರೋಬ್ಬರಿ 8 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡ ಬೆಂಗಳೂರು ಪೊಲೀಸರು

ಬೆಂಗಳೂರು; ಬೆಂಗಳೂರಿನ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 7.83 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ. ವಿದೇಶಗಳಿಂದ ಡ್ರಗ್ಸ್‌ ತಂದು ಬೆಂಗಳೂರಿನ ವಿವಿಧೆಡೆ ಮಾರಾಟ ಮಾಡಲಾಗುತ್ತಿದೆ. ಇದರ ಮಾಹಿತಿ ಅರಿತ ಪೊಲೀಸರು ದಾಖಲಿ ನಡೆಸಿ, ಮಾಲು ಸಮೇತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್‌ ಕಮೀಷನರ್‌ ದಯಾನಂದ್‌ ಅವರು ಮಾಹಿತಿ ಕೊಟ್ಟಿದ್ದಾರೆ. ಪ್ರಕರಣ ಸಂಬಂಧ ಮೂವರು ವಿದೇಶಿಯರು ಹಾಗೂ ಇತರೆ 14 ಮಂದಿಯನ್ನು ಬಂಧಿಸಲಾಗಿದೆ. ಎಲ್ಲರನ್ನೂ ವಿಚಾರಣೆಗೊಳಪಡಿಸಲಾಗಿದೆ. ಎಲ್ಲಿಂದ ಡ್ರಗ್ಸ್‌ ತರುತ್ತಿದ್ದರು. ಯಾರಿಗೆಲ್ಲಾ ಮಾರಾಟ ಮಾಡುತ್ತಿದ್ದರು..? ಇದರ ಹಿಂದೆ ಇನ್ನೂ ಯಾರ್ಯಾರಿದ್ದಾರೆ ಎಂಬುದರ ಕುರಿತು ತೀವ್ರ ತನಿಖೆ ನಡೆಯುತ್ತಿದೆ.

 

Share Post