ಸಂತೋಷ್ ಆತ್ಮಹತ್ಯೆ ಪ್ರಕರಣ; ಕೂಡಲೇ ಕಾನೂನು ಕ್ರಮ ಜರುಗಿಸಬೇಕು – ಡಿ.ಕೆ.ಶಿವಕುಮಾರ್
ಬೆಂಗಳೂರು: ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಕೂಡಲೇ ಕಾನೂನು ಕ್ರಮ ಆಗಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಪ್ರಕರಣದಲ್ಲಿ ಏನೂ ಮಾಡಲ್ಲ ಎಂದು ಗೊತ್ತಿದೆ. ಹೀಗಾಗಿ ಪೊಲೀಸರೇ ಈ ಬಗ್ಗೆ ಸೂಕ್ತ ಕ್ರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂತೋಷ್ ಹೇಳಿದ್ದೆಲ್ಲಾ ಸತ್ಯ ಎಂದು ಹೇಳೋದಕ್ಕೆ ಆಗೋದಿಲ್ಲ. ಆದ್ರೆ ಈ ಪ್ರಕರಣದ ಬಗ್ಗೆ ಸೂಕ್ತ ಹಾಗೂ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕು. ಸಚಿವರ ವಿರುದ್ಧ ಸಂತೋಷ್ ಆರೋಪ ಮಾಡಿದ್ದಾರೆ. ಹೀಗಾಗಿ ಸೂಕ್ತ ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.