Bengaluru

ಸಂತೋಷ್‌ ಆತ್ಮಹತ್ಯೆ ಪ್ರಕರಣ; ನಾಳೆ ಕಾಂಗ್ರೆಸ್‌ನಿಂದ ರಾಜ್ಯಪಾಲರ ಭೇಟಿ

ಬೆಂಗಳೂರು:  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರವಾಗಿ ನಾಳೆ ಕಾಂಗ್ರೆಸ್‌ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ತೀರ್ಮಾನಿಸಿದೆ. ನಾಳೆ ಬೆಳಗ್ಗೆ 9 ಗಂಟೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಪಕ್ಷದ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಧೃವನಾರಾಯಣ್, ಸತೀಶ್ ಜಾರಕಿಹೊಳಿ ಅವರಿರುವ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಲಿದೆ.

40 ಪರ್ಸೆಂಟ್‌ ಕಮಿಷನ್ ವಿಚಾರವಾಗಿ ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಕಾರಣ. ಹೀಗಾಗಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು. ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ನಾಯಕರು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ.

 

Share Post