Bengaluru

ಈಶ್ವರಪ್ಪ ರಾಜೀನಾಮೆ ಕೊಟ್ಟರೆ ಸಾಲದು, ಅವರನ್ನು ಬಂಧಿಸಬೇಕು; ಸಿದ್ದರಾಮಯ್ಯ

ಬೆಂಗಳೂರು: ಸಚಿವ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಸಾಲದು. ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದ ನಂತರ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆಗೂ ಮುನ್ನ ಈಶ್ವರಪ್ಪ ಅವರು ಹೆಸರು ಪ್ರಸ್ತಾಪಿಸಿದ್ದಾರೆ. ಆತ್ಮಹತ್ಯೆಗೆ ಈಶ್ವರಪ್ಪ ಅವರೇ ಕಾರಣ ಎಂದು ಹೇಳಿದ್ದಾರೆ. ಹೀಗಾಗಿ, ಈಶ್ವರಪ್ಪ ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಆಗಲೇಬೇಕು. ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ ಸಿದ್ದರಾಮಯ್ಯ, ನ್ಯಾಯ ಸಿಗದೇ ಹೋದರೆ ನಾವು ಜನತಾ ನ್ಯಾಯಾಲಯದ ಮುಂದೆ ಹೋಗುತ್ತೇವೆ ಎಂದರು. ಮೃತದೇಹ ಬಂದ ನಂತರ ನಾವು ಬೆಳಗಾವಿಗೆ ಭೇಟಿ ನೀಡಲಿದ್ದೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು

 

 

Share Post