Bengaluru

ಸಂತೋಷ್‌ ಆತ್ಮಹತ್ಯೆ ಪ್ರಕರಣ; ಸಂಪುಟದಿಂದ ಈಶ್ವರಪ್ಪರನ್ನು ವಜಾ ಮಾಡಿ; ರಣದೀಪ್‌ ಸುರ್ಜೇವಾಲ ಆಗ್ರಹ

ಬೆಂಗಳೂರು: ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್‌ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ಪ್ರಕರಣದ ಹೊಣೆ ಹೊರಬೇಕು. ಕೂಡಲೇ ಈಶ್ವರಪ್ಪರನ್ನು ವಜಾ ಮಾಡಿ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದರು.

ಮುಖ್ಯಮಂತ್ರಿ ಬೊಮ್ಮಾಯಿಯವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಅವರೂ ಭಾಗಿ ಎಂದರ್ಥವಾಗುತ್ತದೆ. ಕ್ರಮ ಕೈಗೊಳ್ಳದಿದ್ದರೆ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಆಡಳಿತ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪವಿದೆ. ಎಲ್ಲಾ ಸಚಿವರ ಮೇಲೆ ಭ್ರಷ್ಟಾಚಾರ ಆರೋಪವಿದೆ. ಈ ಕಾರಣಕ್ಕಾಗಿಯೇ ಒಬ್ಬ ಗುತ್ತಿಗೆದಾರರ ಜೀವ ತೆತ್ತಿದ್ದಾನೆ ಎಂದು ಆರೋಪಿಸಿದ್ದಾರೆ.

Share Post