ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ವ್ಯತ್ಯಾಸ; ಆಸ್ಪತ್ರೆಗೆ ದಾಖಲು
ಬೆಂಗಳೂರು; ಎರಡನೇ ಪತ್ನಿ ದೂರಿನ ಹಿನ್ನೆಲೆಯಲ್ಲಿ ಬಂಧಿತನಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಸ್ಯಾಟ್ರೋ ರವಿನನ್ನು ಜೈಲಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಧುಮೇಹ ಹೆಚ್ಚಾದ ಹಿನ್ನೆಲೆಯಲ್ಲಿ ಸ್ಯಾಂಟ್ರೋ ರವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಯಾಂಟ್ರೋ ರವಿ ಶುಗರ್ ಲೆವೆಲ್ 400ಕ್ಕೂ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ನಿಯಮಿತ ಮಾತ್ರೆಗಳಿಗಿಂತ ಹೆಚ್ಚಿನ ಮಾತ್ರೆಗಳನ್ನು ಸೇವಿಸಿದ ಅನುಮಾನ ಬಂದಿದೆ. ಸದ್ಯಕ್ಕೆ ವೈದ್ಯರ ಬಳಿ ಅಧಿಕಾರಿಗಳು ಮಾಹಿತಿ ತಿಳಿದುಕೊಳ್ಳುತ್ತಿದ್ದಾರೆ. ಸ್ಯಾಂಟ್ರೋ ರವಿ ಸಿಐಡಿ ತನಿಖೆ ಎದುರುತ್ತಿದ್ದಾನೆ.