ಸಂಜೆ 4.30ಕ್ಕೆ ಸವದಿ ಅಧಿಕೃತ ಕಾಂಗ್ರೆಸ್ ಸೇರ್ಪಡೆ; ಡಿ.ಕೆ.ಶಿವಕುಮಾರ್
ಬೆಂಗಳೂರು; ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರು ಇಂದು ಮಧ್ಯಾಹ್ನ 4.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸಿದ್ದರಾಮಯ್ಯ ನಿವಾಸದಲ್ಲಿ ಮಾತುಕತೆಯ ನಂತರ ಅವರು ಮಾತನಾಡಿದರು.
ಲಕ್ಷ್ಮಣ ಸವದಿಯವರು ಕಾಂಗ್ರೆಸ್ ಸಿದ್ಧಾಂತವನ್ನು ಒಪ್ಪಿ ನಮ್ಮ ಕುಟುಂಬದ ಸದಸ್ಯರಾಗಲು ಒಪ್ಪಿದ್ದಾರೆ. ಸಿದ್ದರಾಮಯ್ಯ, ನಾನು, ಸುರ್ಜೇವಾಲಾ ಅವರು ಚರ್ಚೆ ನಡೆಸಿ ಸವದಿಯವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ತೀರ್ಮಾನಿಸಿದ್ದೇವೆ. ಸವದಿಯವರು ಕಾಂಗ್ರೆಸ್ ಸೇರಿದ ಮೇಲೆ ಇನ್ನೂ ಸುಮಾರು ಜನ ಕಾಂಗ್ರೆಸ್ಗೆ ಬರುವವರಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಂಜೆ 4 ಗಂಟೆಗೆ ಪರಿಷತ್ ಸಭಾಪತಿಯವರನ್ನು ಭೇಟಿಯಾಗಲಿರುವ ಸವದಿ ಅವರು, ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅನಂತರ ಅವರು ಕಾಂಗ್ರೆಸ್ ಸೇರಲಿದ್ದಾರೆ.