ಸಾವರ್ಕರ್ ಭಾವಚಿತ್ರ ಕಿತ್ತುಹಾಕಿದವರು ಕ್ಷಮೆ ಕೇಳಬೇಕು; ಈಶ್ವರಪ್ಪ ಆಗ್ರಹ
ಬೆಂಗಳೂರು; ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನೋತ್ಸವ ವೇಳೆ ಸಾವರ್ಕರ್ ಭಾವಚಿತ್ರವನ್ನು ತೆಗೆದಿದ್ದಾರೆ. ಇದಕ್ಕೆ ಅವರು ಕ್ಷಮೆ ಕೇಳಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಿನ್ನೆ ನಡೆದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರ ಇಲ್ಲದಿದ್ದಕ್ಕೆ ಕಾಂಗ್ರೆಸ್ ಪಕ್ಷದವರು ಈ ರೀತಿ ಮಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷದವರು ಮೊದಲ ಕ್ಷಮೆ ಕೇಳಬೇಕು. ಇನ್ನು ಪ್ರೇಮ್ ಸಿಂಗ್ ಎಂಬ ಯುವಕನ ಕೊಲೆಗೆ ಯತ್ನಿಸಿದವರು ಯಾರೆಂದು ತಿಳಿಯಬೇಕು. ಅದರ ಹಿಂದೆ ಯಾರಿದ್ದಾರೆ ಎಂದು ಗೊತ್ತಾಗಬೇಕು. ಇದಕ್ಕಾಗಿ ಸಿಎಂ ಬೊಮ್ಮಾಯಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.