ಎಸ್‌ಸಿ, ಎಸ್‌ಟಿ ಮೀಸಲಾತಿ ವಿಚಾರ; ಕಾಂಗ್ರೆಸ್‌ನಿಂದ ಪ್ರತಿಭಟನೆ
ಬೆಂಗಳೂರು; ಮೀಸಲಾತಿ ಹೆಚ್ಚಳ ವಿಚಾರದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಆಸೆ ತೋರಿಸಿ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿತು. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ಕಚೇರಿಯಿಂದ ರಾಜಭವನದವರೆಗೆ ಮೆರವಣಿಗೆ ನಡೆಸಲು ತೀರ್ಮಾನಿಸಲಾಗಿತ್ತು. ಆದ್ರೆ ಪೊಲೀಸರು ಅರ್ಧದಲ್ಲೇ ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದರು.
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಸಂಬಂಧ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿಲ್ಲ. ಸುಮ್ಮನೆ ಆಸೆ ತೋರಿಸಿ ಮೋಸ ಮಾಡುತ್ತಿದೆ. ಹೀಗಾಗಿ ಕೂಡಲೇ ಶೆಡ್ಯೂಲ್ 9ರಲ್ಲಿ ಸೇರ್ಪಡೆ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಆದ್ರೆ ಪೊಲೀಸರು ಮೆರವಣಿಗೆಯನ್ನು ಅರ್ಧದಲ್ಲೇ ತಡೆದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಕೊನೆಗೆ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ಕರೆದೊಯ್ದರು.