Bengaluru

ಬೆಂಗಳೂರು : ಜನವರಿ 31ರವರೆಗೆ ಶಾಲೆಗಳಿಗೆ ರಜೆ ವಿಸ್ತರಣೆ

ಬೆಂಗಳುರು : ಮೂರನೇ ಅಲೆ ಸಮುದಾಯಕ್ಕೆ ಹಬ್ಬಿರುವ ಕಾರಣದಿಂದ ಸಾಕಷ್ಟು ಕಠಿಣ ರೂಲ್ಸ್‌ಗಳನ್ನು ಸರ್ಕಾರ ಜಾರಿಗೊಳಿಸುತ್ತಿದೆ. ಬೆಂಗಳೂರಿನಿಂದಲೇ ಅತಿ ಹೆಚ್ಚು ಕೇಸ್‌ಗಳು ಬರುತ್ತಿರುವ ಕಾರಣ ಬೆಂಗಳೂರಿನ ಶಾಲೆಗಳಿಗೆ ಜನವರಿ 15ರ ವರೆಗೆ ರಜೆ ನೀಡಲಾಗಿತ್ತು. ಕೇಸ್‌ಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ಬೆಂಗಳೂರಿನಲ್ಲಿ ಶಾಲೆಗಳಿಗೆ ಜನವರಿ 31ರ ವರೆಗೆ ರಜೆ ವಿಸ್ತರಿಸಲಾಗಿದೆ. 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ರಜೆ ನೀಡಲಾಗಿದೆ.

ಗ್ರಾಮಾಂತರ ಪ್ರದೇಶದಲ್ಲಿ ಕೊರೊನಾ ಸೋಂಕು ಕಡಿಮೆಯಿರುವ ಕಾರಣ ಗ್ರಾಮಾಂತರ ಪ್ರದೇಶಗಳಲ್ಲಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಹೇಳಿದ್ದಾರೆ.

ಸಚಿವ ಬಿ.ಸಿ. ನಾಗೇಶ್‌ ಮಾಧ್ಯಮದವರೊಂದಿಗೆ ಮಾತನಾಡಿ ಗ್ರಾಮಾಂತರ ಪ್ರದೇಶದಲ್ಲಿ ಕೊರೊನಾ ಸೋಂಕು ಕಡಿಮೆಯಿದೆ ಹಾಗಾಗಿ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಬೆಂಗಳೂರು, ಬೆಳಗಾವಿ ಮೈಸೂರಿನಲ್ಲಷ್ಟೇ ಕೇಸ್‌ಗಳು ಹೆಚ್ಚುತ್ತಿವೆ ಎಂದು ಹೇಳಿದ್ದಾರೆ.

Share Post