Bengaluru

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಯಾರಿಗೆ ಎಷ್ಟು ಅಂಕ..?

ಬೆಂಗಳೂರು; ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟ ಮಾಡಿದ್ದಾರೆ..

ಇದನ್ನೂ ಓದಿ; ಬೇಸಿಗೆಯಲ್ಲಿ ಹೊಸ ತೊಡಕಿನ ಮಾಂಸ ಹೀಗೆ ಜೀರ್ಣಿಸಿಕೊಳ್ಳಿ!

2024ರ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ 6 ಲಕ್ಷ 98 ಸಾವಿರ 378 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.. 6,81,079 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಸುಮಾರು 17 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು.. 5 ಲಕ್ಷ 52 ಸಾವಿರದ 690 ವಿದ್ಯಾರ್ಥಿಗಳು ಈ ಬಾರಿ ಪಿಯುಸಿ ಉತ್ತೀರ್ಣರಾಗಿದ್ದಾರೆ. ಶೇ.81. 15ರಷ್ಟು ಫಲಿತಾಂಶ ಬಂದಿದ್ದು, 2023ಕ್ಕೆ ಹೋಲಿಸಿದರೆ ( 74.67 ) ಈ ಬಾರಿ ಉತ್ತಮ ಫಲಿತಾಂಶ ಬಂದಿದೆ.

ಇದನ್ನೂ ಓದಿ; ಬಿಜೆಪಿ-ಜೆಡಿಎಸ್‌ ಒಕ್ಕಲಿಗ ನಾಯಕರ ಹೊಸತೊಡಕು ಪಾಲಿಟಿಕ್ಸ್‌!

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದರೆ, ಗದಗ ಕೊನೆಯ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ವಿಜ್ಞಾನ ವಿಭಾಗದಲ್ಲಿ ಮೂಡಬಿದರೆ ಆಳ್ವಾಸ್‌ ಕಾಲೇಜಿನ ವಿದ್ಯಾಲಕ್ಷ್ಮಿ 598 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.. ಕಲಾ ವಿಭಾಗದಲ್ಲಿ NMKRV ಕಾಲೇಜಿನ ಮೇಧಾ 596 ಅಂಕ ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ. ಇನ್ನು ಕಾರ್ಮರ್ಸ್‌ ವಿಭಾಗದಲ್ಲಿ ತುಮಕೂರಿನ ವಿದ್ಯಾನಿಧಿ ಕಾಲೇಜಿನ ಜ್ಞಾನವಿ 597 ಅಂಕಗಳೊಂದಿಗೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ; ಹಬ್ಬದ ರಾತ್ರಿಯೇ ಭೀಕರ ಅಪಘಾತ; ಬಸ್‌ ಅಪಘಾತದಲ್ಲಿ 11 ಮಂದಿ ದುರ್ಮರಣ!

Share Post