ಹಿರಿಯ ನಟ ಲೋಹಿತಾಶ್ವಗೆ ಹೃದಯಾಘಾತ; ಚಿಕಿತ್ಸೆ
ಬೆಂಗಳೂರು; ಹಿರಿಯ ರಂಗಕರ್ಮಿ ಹಾಗೂ ಸ್ಯಾಂಡಲ್‌ವುಡ್ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ನಿನ್ನೆ ಹೃದಯಾಘಾತವಾಗಿದೆ. ಹೀಗಾಗಿ ಕುಮಾರಸ್ವಾಮಿ ಲೇಔಟ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಅವರ ಪುತ್ರ ಶರತ್ ಲೋಹಿತಾಶ್ವ ಮಾಹಿತಿ ನೀಡಿದ್ದಾರೆ. ತಂದೆಯ ಆರೋಗ್ಯ ಗಂಭೀರವಾಗಿದೆ. ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ತಂದೆಯವರು ಯಾವ ರೀತಿ ಸ್ಪಂದನೆ ಮಾಡುತ್ತಾರೆ ಎಂಬುದು ಗೊತ್ತಾಗಬೇಕು ಎಂದು ತಿಳಿಸಿದ್ದಾರೆ.