ಪಟಾಕಿ ಮಾರಾಟಕ್ಕೆ ಹಲವು ಷರತ್ತುಗಳು; ಹಸಿರು ಪಟಾಕಿ ಮಾತ್ರ ಮಾರಾಟ
ಬೆಂಗಳೂರು; ಪಟಾಕಿಗಳಿಂದ ಆಗುವ ಅನಾಹುತಗಳನ್ನು ತಪ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಪಾಲಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಸರ್ಕಾರ ಹಲವು ನಿರ್ದೇಶನಗಳನ್ನು ನೀಡಿದೆ.
೧. ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ, ಕ್ಯೂಆರ್ ಕೋಡ್ ಇರಬೇಕು
೨. ಪಟಾಕಿ ಮಳಿಗೆಗಳಲ್ಲಿ ಎರಡೂ ಕಡೆಯಿಂದ ಸರಾಗವಾಗಿ ಗಾಳಿಯಾಡುವಂತೆ ವ್ಯವಸ್ಥೆ ಮಾಡಬೇಕು
೩. ಮಳಿಗೆ ನಿರ್ಮಾಣಕ್ಕೆ ಬಳಸುವ ಸಾಧನಗಳು ಬೆಂಕಿ ತಡೆಗಟ್ಟುವಂತಹವು ಇರಬೇಕು
೪. ಪ್ರತಿ ಮಳಿಗೆಗೆ ಮುಂದಿನಿಂದ ಹಾಗೂ ಹಿಂದಿನಿಂದ ಪ್ರವೇಶಿಸುವ ವ್ಯವಸ್ಥೆ ಇರಬೇಕು
೫. ಮಳಿಗೆಗಳ ಗಾತ್ರ 10 x 10 ಅಡಿಗೆ ಸೀಮಿತಗೊಳಿಸಿರಬೇಕು
೬. ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಗೆ 3 ಮೀಟರ್ ಅಂತರವಿರಬೇಕು
೭. ಪ್ರತಿಯೊಂದು ಮಳಿಗೆಗಳಲ್ಲಿ ಪರವಾನಿಗೆ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು
ಹೀಗೆ ಹಲವು ನಿಬಂಧನೆಗಳನ್ನು ಹಾಕಲಾಗಿದೆ.