BengaluruPolitics

ಹಲವು ನಾಯಕರು ಜೆಡಿಎಸ್‌, ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು; ಚುನಾವಣೆ ಹತ್ತಿರವಾಗ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿ ನಡೆಯುತ್ತಿದೆ. ಇಂದು ಹಲವು ಮುಖಂಡರು ಜೆಡಿಎಸ್‌, ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಹಲವು ನಾಯಕರನ್ನು ಕಾಂಗ್ರೆಸ್‌ಗೆ ಬರಮಾಡಿಕೊಳ್ಳಲಾಗಿದೆ. ಚಿಕ್ಕನಾಯಕನಹಳ್ಳಿಯ ಮಾಜಿ ಶಾಸಕ, ಬಿಜೆಪಿ ಮುಖಂಡ ಕೆ.ಎಸ್.ಕಿರಣ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಸಂದೇಶ್ ನಾಗರಾಜ್ ಮತ್ತು ತುಮಕೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್‌ ನಾಯಕ ಎಚ್.ನಿಂಗಪ್ಪ ಇಂದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಮ್ಮುಖದಲ್ಲಿ ಇವರೆಲ್ಲಾ ಕಾಂಗ್ರೆಸ್‌ ಸೇರಿದರು. ಜಿ. ಪರಮೇಶ್ವರ, ಕೆ.ಎಚ್. ಮುನಿಯಪ್ಪ, ಕೆ.ಎನ್.ರಾಜಣ್ಣ ಮುಂತಾದವರು ಉಪಸ್ಥಿತರಿದ್ದರು.

Share Post