BengaluruPolitics

ಶೆಟ್ಟರ್‌ ಅವರಿಗೆ ಟಿಕೆಟ್‌ ಖಚಿತ; ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು; ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್‌ ಘೋಷಣೆ ಮಾಡಿಲ್ಲ. ಇದರಿಂದಾಗಿ ಅವರು ಅಸಮಾಧಾನಗೊಂಡಿದ್ದಾರೆ. ಈ ನಡುವೆಯೇ ಮಾಜಿ ಸಿಎಂ ಯಡಿಯೂರಪ್ಪ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಜಗದೀಶ್‌ ಶೆಟ್ಟರ್‌ ಅವರು ನಮ್ಮ ನಾಯಕರು. ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್‌ ತಪ್ಪೋದಿಲ್ಲ. ಅವರ ಸ್ಪರ್ಧೆ ನಿಶ್ಚಿತ ಎಂದು ಹೇಳಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಯಡಿಯೂರಪ್ಪ ಅವರು ಮಾತನಾಡಿದರು. ಕಾರಣಾಂತರಗಳಿಂದ ಮೊದಲ ಪಟ್ಟಿಯಲ್ಲಿ ಶೆಟ್ಟರ್‌ಗೆ ಟಿಕೆಟ್‌ ಪ್ರಕಟವಾಗಿಲ್ಲ. ಆದ್ರೆ ಎರಡನೇ ಪಟ್ಟಿಯಲ್ಲಿ ಶೆಟ್ಟರ್‌ ಅವರ ಹೆಸರು ಇರಲಿದೆ. ಅವರು ಬಿಜೆಪಿ ಅಭ್ಯರ್ಥಿಯಾಗಿಯೇ ಸ್ಪರ್ಧೆ ಮಾಡಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

Share Post