BengaluruLifestyle

ಕರ್ನಾಟಕದಿಂದ ಅಯೋಧ್ಯೆಗೆ ಘಂಟೆಗಳ ರವಾನೆ

ಬೆಂಗಳೂರು; 2024ರ ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಅಯೋಧ್ಯೆಗೆ ಘಂಟೆಗಳನ್ನು ಕಳುಹಿಸಿಕೊಡಲಾಗಿದೆ. ಬೆಂಗಳೂರಿನ ಬನಶಂಕರಿ ಒಂದನೇ ಹಂತದ ರಾಜೇಂದ್ರ ನಾಯ್ಡು ಅವರು ಅಯೋಧ್ಯೆಗೆ ಘಂಟೆಗಳನ್ನು ಸಮರ್ಪಿಸಿದ್ದಾರೆ.

2.5 ಟನ್ ತೂಕದ ಘಂಟೆಗಳು ಇವಾಗಿವೆ. ಇದರಲ್ಲಿ 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳೂ ಸೇರಿವೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾಗಿದ್ದರು.

ಘಂಟೆಗಳನ್ನು ಇಂದು ಅಯೋಧ್ಯೆಗೆ ಕೊಂಡೊಯ್ಯಲಾಗುತ್ತದೆ. ಅಂದಹಾಗೆ ಈ ಘಂಟೆಗಳನ್ನು ತಮಿಳುನಾಡಿನ ನಾಮಕ್ಕಲ್‌ನಲ್ಲಿ ತಯಾರಿಸಲಾಗಿದೆ. ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ.

Share Post