BengaluruEconomy

ಮಾರ್ಚ್‌ ಮೊದಲ ದಿನವೇ ಶಾಕ್‌; ಅಡುಗೆ ಅನಿಲ ಬೆಲೆ 50 ರೂ. ಹೆಚ್ಚಳ

ನವದೆಹಲಿ; ಕೇಂದ್ರ ಸರ್ಕಾರ ಗ್ರಾಹಕರಿಗೆ ಮತ್ತೊಂದು ಶಾಕ್‌ ನೀಡಿದೆ. ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಎಲ್‌ಪಿಜಿ ಗ್ಯಾಸ್‌ ಬೆಲೆಯನ್ನು ಏರಿಕೆ ಮಾಡಲಾಗಿದೆ. ವಾಣಿಜ್ಯ ಎಲ್‍ಪಿಜಿ ಬೆಲೆಯಲ್ಲಿ 350.50 ರೂಪಾಯಿ ಏರಿಕೆ ಮಾಡಲಾಗಿದೆ. ಗೃಹಬಳಕೆ ಸಿಲಿಂಡರ್‌ಗಳ ಬೆಲೆ 50 ರೂಪಾಯಿ ಏರಿಕೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್ ಬೆಲೆ 1,055.50 ರೂ. ಆಗಿದೆ.

ಇಂದಿನಿಂದಲೇ ಹೊಸ ದರಗಳು ಜಾರಿಯಾಗಲಿವೆ ಎಂದು ತಿಳಿದುಬಂದಿದೆ. ಜನವರಿಯಲ್ಲಷ್ಟೇ ವಾಣಿಜ್ಯ ಬಳಕೆ ಎಲ್‌ಪಿಜಿ ಬೆಲೆ ಏರಿಕೆ ಮಾಡಲಾಗಿತ್ತು. ಇದೀಗ ಮತ್ತೆ ಏರಿಕೆ ಮಾಡಲಾಗಿದೆ.

Share Post