Bengaluru

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ; 8 ಮಂದಿಯಿಂದ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಪೈಶಾಚಿಕ ಕೃತ್ಯವೊಂದು ನಡೆದುಹೋಗಿದೆ. ಅಪ್ರಾಪ್ತ ಬಾಲಕಿ ಮೇಲೆ ಎಂಟು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿರುವ ಬಗ್ಗೆ ತಡವಾಗಿ ವರದಿಯಾಗಿದೆ. ಮೊದಲು ಇಬ್ಬರು ಆರೋಪಿಗಳು 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಬಳಿಕ ವಿಚಾರ ತಿಳಿಸಿದರೆ ಕೊಲೆ ಮಾಡೋದಾಗಿ ಬೆದರಿಸಿ ಕಳಿಸಿದ್ದಾರೆ. ನಂತರ ವಿಡಿಯೋ ತೋರಿಸಿ, ಅದನ್ನು ರಿಲೀಸ್‌ ಮಾಡುತ್ತೇವೆಂದು ಬೆದರಿಸಿ ಎಂಟು ಜನ ಲೈಂಗಿಕ‌ ದೌರ್ಜನ್ಯ ಎಸಗಿದ್ದಾರೆ ಎಂದು ಗೊತ್ತಾಗಿದೆ.

      ಸಾಮೂಹಿಕ ಅತ್ಯಾಚಾರದ ನಂತರ ಬಾಲಕಿ ಅಳುತ್ತಾ ಮನೆಗೆ ಬಂದಿದ್ದಾಳೆ. ಯಾಕೆ ಎಂದು ಮನೆಯವರು ಪ್ರಶ್ನಿಸಿದಾಗ ಆಕೆ ಮೊದಲು ಹೆದರಿದ್ದಾಳೆ. ಕಬಾಬ್‌ ತಿಂದೆ. ಅದು ಖಾರ ಇತ್ತು. ಅದಕ್ಕೆ ಅಳುತ್ತಿದ್ದೇನೆ ಎಂದು ಹೇಳಿದ್ದಳು. ಅನಂತರ ನಿಧಾನವಾಗಿ ವಿಚಾರಿಸಿದಾಗ, ಸಾಮೂಹಿಕ ಅತ್ಯಾಚಾರ ಆಗಿರುವ ಬಗ್ಗೆ ಬಾಯಿಬಿಟ್ಟಿದ್ದಾಳೆ. ಕೂಡಲೇ ಬಾಲಕಿ ತಾಯಿ ಏಪ್ರಿಲ್‌ ಐದರಂದು ಯಲಹಂಕ ಠಾಣೆಗೆ ದೂರು ನೀಡಿದ್ದಾಳೆ.

ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡಿರುವ ಪೊಲೀಸರು ಇದುವರೆಗೆ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.

Share Post