Bengaluru

ಪಠ್ಯಪುಸ್ತಕ ತಡೆಹಿಡಿಯಿರಿ; ಶಿಕ್ಷಣ ಸಚಿವರ ರಾಜೀನಾಮೆ ಪಡೆಯಿರಿ; ಸಿಎಂಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು; ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ರೂಪಿಸಿರುವ ಪಠ್ಯ ಪುಸ್ತಕಗಳನ್ನು ತಕ್ಷಣ ತಡೆಹಿಡಿಯಬೇಕು. ಈ ಸಮಿತಿ ಸೇರಿಸಿರುವ ವಾಸ್ತವಕ್ಕೆ ದೂರವಾದ ಸಂಗತಿಗಳನ್ನು ಮತ್ತು ತಿರುಚಿರುವ ವಿಷಯಗಳ ಬಗ್ಗೆ ಉನ್ನತ ಮಟ್ಟದ ಸಮಿತಿಯಿಂದ ವರದಿ ಪಡೆಯಬೇಕು. ಇಷ್ಟೆಲ್ಲ ಎಡವಟ್ಟುಗಳಿಗೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ರಾಜೀನಾಮೆ‌ ಪಡೆಯಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಈಗಾಗಲೇ ಶಾಲೆಗಳು ಆರಂಭಗೊಂಡಿರುವುದರಿಂದ ಮಕ್ಕಳಿಗೆ ತೊಂದರೆ ಆಗದಂತೆ ಹಿಂದಿನ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಪಠ್ಯಗಳನ್ನೇ ಪ್ರಸಕ್ತ ಸಾಲಿಗೂ ವಿತರಿಸಬೇಕು. ನಿಜವಾದ ಅರ್ಹತೆ ಇರುವ ಶಿಕ್ಷಣ ತಜ್ಞರ ಸಮಿತಿ ಮೂಲಕ ಪರಿಷ್ಕರಣಾ ಸಮಿತಿ ಮಾಡಿರುವ ಅದ್ವಾನಗಳನ್ನು ಸರಿಪಡಿಸಬೇಕು. ನಾಡಿನ ಸಂಸ್ಕೃತಿ, ಪರಂಪರೆ, ಚರಿತ್ರೆ, ಸಂವಿಧಾನದ ಆಶಯಗಳ ಬಗ್ಗೆ ಗೌರವ ಇರುವವರನ್ನು ಸಮಿತಿಗೆ ನೇಮಿಸಬೇಕು ಎಂದೂ ಆಗ್ರಹಿಸಿದ್ದಾರೆ.

Share Post