Bengaluru

ತಾ ಕಳ್ಳ, ಇತರರ ನಂಬ ಎಂಬ ಸ್ಥಿತಿ ಸುನೀಲ್‌ ಕುಮಾರ್‌ದು; ಸಿದ್ದರಾಮಯ್ಯ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಧ್ವನಿ ಎತ್ತಿದ್ದಾರೆ. ಹೀಗಾಗಿ ಅವರಿಗೆ ನೋಟಿಸ್‌ ನೀಡುವ ಕೆಲಸ ನಡೆದಿದೆ. ಆದ್ರೆ ಪ್ರಿಯಾಂಕ್‌ ಖರ್ಗೆ ಹಿಂದೆ ಯವಾಗಲೂ ಕಾಂಗ್ರೆಸ್‌ ಪಕ್ಷ ಇರುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ನಡೆಸಿರುವ ಅವರು, ಸಚಿವ ಸುನಿಲ್‌ ಕುಮಾರ್‌ ನೀಡಿರುವ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರ ಟ್ವೀಟ್‌ಗಳಲ್ಲಿರುವ ಮಾಹಿತಿ ಇಲ್ಲಿದೆ.

ಪಿಎಸ್ಐ ನೇಮಕ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಶಾಸಕ @PriyankKharge ಅವರನ್ನೇ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸುತ್ತಿರುವ ಸಚಿವ @karkalasunil ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ. ಈ ಬೆದರಿಕೆಗೆ ನಾವು ಜಗ್ಗುವುದಿಲ್ಲ. ಖರ್ಗೆಯವರ ಬೆನ್ನಹಿಂದೆ @INCKarnataka ಪಕ್ಷ ಇದೆ.

ಸಚಿವ @karkalasunil ನೀಡಿದ ಹೇಳಿಕೆಯ ಬೆನ್ನಿನಲ್ಲಿಯೇ ಸಿಐಡಿ ಪೊಲೀಸರು @PriyankKharge ಅವರ ವಿಚಾರಣೆಗೆ ನೋಟೀಸ್ ನೀಡಿದ್ದನ್ನು ನೋಡಿದರೆ, @BJP4Karnataka ನಾಯಕರು ಹಗರಣದ ಬಗ್ಗೆ ಮಾತನಾಡುವವರ ಬಾಯಿಮುಚ್ಚಿಸುವ ಹುನ್ನಾರ ನಡೆಸುತ್ತಿರುವಂತೆ ಕಾಣುತ್ತಿದೆ.

ಅಡಿಯಿಂದ ಮುಡಿವರೆಗೆ 100% ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ರಾಜ್ಯದ @BJP4Karnataka ಸರ್ಕಾರವನ್ನು ಸುಳ್ಳುಗಳ ಬಣ್ಣಹೊಡೆದು ಅಳಿಸಲಾಗದು. ಸರ್ಕಾರ, ತನಿಖಾ ಸಂಸ್ಥೆಗಳು ನಿಮ್ಮ ನಿಯಂತ್ರಣದಲ್ಲಿರಬಹುದು, ರಾಜ್ಯದ ಜನತೆ ನಮ್ಮ ಜೊತೆ ಇದ್ದಾರೆ.

Share Post