BengaluruPolitics

ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ; ಸಿದ್ದು, ಡಿಕೆಶಿ ಟ್ವೀಟ್‌

ನವದೆಹಲಿ; ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ಹೀಗಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅಭಿನಂದನೆ ಸಲ್ಲಿಸಿದ್ದಾರೆ. ಸೋನಿಯಾಗಾಂಧಿ ಹಾಗೂ ರಾಹುಲ್‌ ಗಾಂಧಿ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಕೂಡಾ ಖರ್ಗೆ ಅವರಿಗೆ ಶುಭಾಶಯ ತಿಳಿಸಿದ್ದಾರೆ.

‘ಕಾಂಗ್ರೆಸ್ ಪಕ್ಷದ ನೂತನ‌ ಅಧ್ಯಕ್ಷರಾಗಿ ಆಯ್ಕೆಯಾದ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು. ಪ್ರತಿಭೆ ಮತ್ತು ಅನುಭವವನ್ನು‌ ಮೈಗೂಡಿಸಿಕೊಂಡ ಖರ್ಗೆಯವರಿಗೆ ಕಾಂಗ್ರೆಸ್ ಪಕ್ಷವನ್ನು ಯಶಸ್ಸಿ ಹಾದಿಯಲ್ಲಿ ಮುನ್ನಡೆಸುವ ಶಕ್ತಿ ಇದೆ. ಖರ್ಗೆಯವರ ಆಯ್ಕೆ ಕನ್ನಡಿಗರಿಗೂ ಹೆಮ್ಮೆಯ‌ ಸಂಗತಿ’ ಎಂದು ಸಿದ್ದರಾಮಯ್ಯ ಟ್ವೀಟ್‌ ಮೂಲಕ ಅಭಿನಂದನೆ ತಿಳಿಸಿದ್ದಾರೆ.

ಇನ್ನು ಡಿ.ಕೆ.ಶಿವಕುಮಾರ್‌ ಅವರು ಕೂಡಾ ಟ್ವೀಟ್‌ ಮಾಡಿದ್ದು, ‘ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೃದಯ ಪೂರ್ವಕ ಅಭಿನಂದನೆಗಳು. ಅವರ ನಾಯಕತ್ವದಲ್ಲಿ ಕಾಂಗ್ರೆಸ್‌ ಪಕ್ಷ ಇನ್ನಷ್ಟು ಎತ್ತರಕ್ಕೇರಲಿದೆ ಎನ್ನುವ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.

ಇನ್ನು ಕಾಂಗ್ರೆಸ್‌ ರಾಜ್ಯ ಘಟಕದಿಂದಲೂ ಟ್ವೀಟ್‌ ಮಾಡಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ.

Share Post