ಚಡ್ಡಿಗೆ ಬೆಂಕಿ ಹಚ್ಚಿದರೆ ನಿಮ್ಮ ಬುಡವೇ ಬೂದಿಯಾಗುತ್ತದೆ; ಈಶ್ವರಪ್ಪ ಎಚ್ಚರಿಕೆ
ಬೆಂಗಳೂರು; ಸಿದ್ದರಾಮಯ್ಯ ಅವರೇ, ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್‌ಎಸ್‌ಎಸ್ ತಂಟೆಗೆ ಬರಬೇಡಿ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.
ತಿಪಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮನೆ ಎದುರು ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ಬಂಧಿಸದಿದ್ದರೆ ರಾಜ್ಯದಾದ್ಯಂತ ಚಡ್ಡಿ ಸುಡುವ ಪ್ರತಿಭಟನೆ ನಡೆಸುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಈಶ್ವರಪ್ಪ ಟ್ವೀಟ್ ಮಾಡಿದ್ದಾರೆ.
‘ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ… ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ, ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ ಒಂದೇ ಬಾಕಿ ಇದೆ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ’ ಎಂದು ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ.