ಕೊವಿಡ್ ನಿಯಮ ಪಾಲಿಸಿಯೇ ಪಾದಯಾತ್ರೆ: ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು: ಕೊವಿಡ್ ನಿಯಮಗಳನ್ನು ಪಾಲಿಸಿಯೇ ನಾವು ಪಾದಯಾತ್ರೆ ಮಾಡುತ್ತೇವೆ ಎಂದು ವಿಪಕ್ಷ ನಾಯ ಸಿದ್ದರಾಮಯ್ಯ ಹೇಳಿದ್ದಾರೆ. ಮೇಕೆದಾಟು ಪಾದಯಾತ್ರೆಗೆ ಸರ್ಕಾರ ಅಡ್ಡಿಪಡಿಸುವ ಬಗ್ಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಬಿಜೆಪಿ ಪಾದಯಾತ್ರೆ ನಡೆಸುತ್ತಿದೆ. ಅಲ್ಲಿ ಅನುಮತಿ ನೀಡಿರುವಾಗ ಇಲ್ಲಿ ಏಕೆ ಅನುಮತಿ ನೀಡುವುದಿಲ್ಲ ಎಂದು ಪ್ರಶ್ನಿಸಿದದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾವು ಕೊವಿಡ್ ನಿಯಮಗಳನ್ನು ಪಾಲನೆ ಮಾಡುತ್ತೇನೆ. ಸರ್ಕಾರದ ನಿಯಮಗಳಿಗೆ ಅನುಸಾರವಾಗಿಯೇ ನಾವು ಪಾದಯಾತ್ರೆ ಮಾಡುತ್ತೇವೆ. ನಾವು ರಾಜಕೀಯ ಮಾಡುತ್ತಿಲ್ಲ. ಬದಲಾಗಿ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡುತ್ತಿದ್ದೇವೆ. ಇದಕ್ಕೆ ಅನುಮತಿ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.