BengaluruPolitics

ಯಾವುದೇ ಸಂಸ್ಥೆ ಗೌರವ ಹುಟ್ಟಿಸಬೇಕು, ಭಯವಲ್ಲ; ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು; ಆರ್‌ಎಸ್‌ಎಸ್‌ ಅಂದ್ರೆ ಸಿದ್ದರಾಮಯ್ಯ ಅವರಿಗೆ ಭಯ ಎಂಬ ಕೇಂದ್ರ ಮಾಜಿ ಸಚಿವ ಸದಾನಂದಗೌಡರ ಹೇಳಿಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಯಾವುದೇ ವ್ಯಕ್ತಿ-ಸಿದ್ದಾಂತ- ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ‌ ಆತ್ಮಾವಲೋಕನ‌ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಪಡುವವರಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಟ್ವೀಟ್‌ಗಳ ಯಥಾವತ್‌ ಮಾಹಿತಿ ಇಲ್ಲಿದೆ..

ಟ್ವೀಟ್‌-೧

ಯಾವುದೇ ವ್ಯಕ್ತಿ-ಸಿದ್ದಾಂತ- ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ‌ ಆತ್ಮಾವಲೋಕನ‌ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಪಡುವವರಲ್ಲ

ಟ್ವೀಟ್‌-೨

ಆರ್.ಎಸ್.ಎಸ್ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಯಾಕೆ ಅಲ್ಲಿ ಹಿಂದುಗಳೇ ಆಗಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಲ್ಲ?‌ ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ, ಯಾರೂ ಉತ್ತರಿಸುತ್ತಿಲ್ಲ?

ಟ್ವೀಟ್‌-೩

ತಮ್ಮ ಮಕ್ಕಳಿಗೆ ದೇಶ-ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಿ, ದಲಿತ, ಹಿಂದುಳಿದ ಸಮುದಾಯದ ಬಡವರ ಮಕ್ಕಳನ್ನು ಹಿಂಸಾಚಾರಕ್ಕೆ ಇಳಿಸಿ ಜೈಲಿಗೆ ಅಟ್ಟುವ @RSSorg  ಬಗ್ಗೆ ಭಯ ಸಹಜ ಅಲ್ಲವೇ @DVSadanandGowda  ಅವರೇ?

Share Post