BengaluruCrimePolitics

ಸಿದ್ದರಾಮಯ್ಯಗೆ ಜೀವಬೆದರಿಕೆ ಪ್ರಕರಣ; ಮಾಜಿ ಸಚಿವ ಅಶ್ವತ್ಥನಾರಾಯಣ್‌ಗೆ ಬಿಗ್‌ ರಿಲೀಫ್‌

ಬೆಂಗಳೂರು; ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಚಿವ ಅಶ್ವತ್ಥನಾರಾಯಣ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಸಿದ್ದರಾಮಯ್ಯ ಅವರಿಗೆ ಜೀವಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇಲೆ ಈ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್‌ ಮೊರೆ ಹೋಗಿದ್ದ ಮಾಜಿ ಸಚಿವ ಅಶ್ವತ್ಥನಾರಾಯಣ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಎಫ್‌ಐಆರ್‌ಗೆ ತಡೆ ನೀಡಿ ಕೋರ್ಟ್‌ ಆದೇಶ ನೀಡಿದೆ.

ಅಶ್ವತ್ಥನಾರಾಯಣ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ಮಹತ್ವದ ಆದೇಶ ನೀಡಿದೆ. ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಿ ಎಂಬ ರೀತಿಯಲ್ಲಿ ನಾನು ಭಾಷಣ ಮಾಡಿದ್ದೆ ಎಂದು ಅಶ್ವತ್ಥ್‌ ನಾರಾಯಣ್‌ ಹೇಳಿಕೆ ನೀಡಿದ್ದರು. ಇದನ್ನು ಕೋರ್ಟ್‌ ಪರಿಗಣಿಸಿದೆ. ಚುನಾವಣೆಗೂ ಮೊದಲು ಅಶ್ವತ್ಥ್‌ ನಾರಾಯಣ್‌ ಈ ರೀತಿಯ ಹೇಳಿಕೆ ನೀಡಿದ್ದರು. ಈ ವೇಳೆ ಪೊಲೀಸ್‌ ಠಾಣೆಯಲ್ಲಿ ಎನ್‌ಸಿಆರ್‌ ದಾಖಲು ಮಾಡಲಾಗಿತ್ತು. ಆದ್ರೆ, ಈಗ ಹೊಸ ದೂರು ನೀಡಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಆರೋಪಿಸಲಾಗಿತ್ತು.

2023ರ ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಅಶ್ವತ್ಥನಾರಾಯಣ ಅವರು, ಟಿಪ್ಪುವನ್ನು ಉರಿಗೌಡ-ನಂಜೇಗೌಡರು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಿ ಎಂದು ಹೇಳಿದ್ದರು. ಈ ಸಂಬಂಧ ಮೈಸೂರಿನ ಕೆಪಿಸಿಸಿ ವಕ್ತಾರ ಲಕ್ಷ್ಮಣ್‌ ಅವರು ಫೆ.17ರಂದು ದೂರು ನೀಡಿದ್ದರು.

Share Post