ಸಿದ್ದರಾಮಯ್ಯ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ; ಯಡಿಯೂರಪ್ಪ
ಬೆಂಗಳೂರು; ಆರ್‌ಎಸ್‌ಎಸ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಯಡಿಯೂರಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ಏನೇ ಮಾತನಾಡಿದರೂ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಪಿಎಫ್‌ಐ ನಿಷೇಧ ಹಿನ್ನೆಲೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ತಲೆತಿರುಕನಂತೆ ಮಾತನಾಡುವುದು ಸ್ವಾಭಾವಿಕ. ಯಾವುದ ಸರಿ, ಯಾವುದು ತಪ್ಪು ಎಂಬ ಕಲ್ಪನೆಯೇ ಅವರಿಗಿಲ್ಲ. ಹಗುರವಾಗಿ ಮಾತನಾಡಿ ಅವರ ಗೌರವ ಅವರೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.