Bengaluru

ಈಶ್ವರಪ್ಪರನ್ನು ವಜಾ ಮಾಡದಿದ್ರೆ ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ-ಸಿದ್ದು

ಬೆಂಗಳೂರು: ಸಚಿವ ಈಶ್ವರಪ್ಪನವರು ರಾಷ್ಟ್ರಧ್ವಜಕ್ಕೆ ಅಪಮಾನ ಆಗುವ ಹೇಳಿಕೆ ನೀಡಿದ್ದಾರೆ. ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ರಾಜ್ಯಪಾಲರ ಬಳಿ ಮನವಿ ಪತ್ರ ಸಲ್ಲಿಸಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ರು. ವಿಧಾನಸೌಧದಿಂದ ರಾಜಭವನ ಚಲೋ ಪಾದಯಾತ್ರೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಸಿದ್ದರಾಮಯ್ಯ ಈ ಘಟನೆ ಬಗ್ಗೆ ಹೇಳಿಕೆ ನೀಡಿದ ದಿನದಿಂದ ಪ್ರತಿಭಟನೆ ಮಾಡುತ್ತಲೇ ಇದೇವೆ. ಅಹೋರಾತ್ರಿ ಧರಣಿ ಕೂಡ ನಡೆಸುತ್ತೀದ್ದೇವೆ. ವಿಧಾನಸಭೆ ಕಲಾಪದಲ್ಲಿ ಈ ಬಗ್ಗೆ ಚರ್ಚೆ ಮಾಡಲು ಅವಕಾಶ ನೀಡಿ ಎಂದು ನಾವು ಸಭಾಪತಿಯವರಲ್ಲಿ ಮನವಿ ಮಾಡಿದ್ವಿ ಅದಕ್ಕೂ ಅವಕಾಶ ನೀಡಿಲ್ಲ. ಸಂಪುಟದಿಂದ ಕೈ ಬಿಡಿ ಎಂದು ಸಿಎಂ ಬಳಿ ಹೇಳಿದ್ರೆ ಅವರು ಈಶ್ವರಪ್ಪರನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಈಶ್ವರಪ್ಪ ನಮ್ಮ ದೇಶದ, ಹೆಮ್ಮೆಯ ಸಂಕೇತವಾದ ರಾಷ್ಟ್ರಧ್ವಜಕ್ಕೆ ಅಪಮಾನವಾಗುವ ಹೇಳಿಕೆಯನ್ನು ನೀಡಿದ್ದಾರೆ. ಅವರ ಈ ಹೇಳಿಕೆ ಬಗ್ಗೆ ಜೆ.ಪಿನಡ್ಡಾ ಅವರು ಕೂಡ ಪ್ರತಿಕ್ರಿಯೆ ನೀಡಿ ತಪ್ಪೆಂದು ಹೇಳಿದ್ರು. ಜೆ.ಪಿ.ನಡ್ಡಾ ಹೇಳಿದ ಮೇಲಾದ್ರೂ ಸರ್ಕಾರ ಈಶ್ವರಪ್ಪನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕಿತ್ತು ಆದರೆ ಆ ಕೆಲಸ ಮಾಡಲಿಲ್ಲ ಹಾಗಾಗಿ ನಾವು ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ.

ರಾಜ್ಯಪಾಲರು ನಮ್ಮ ಮನವಿಗೆ ಸ್ಪಂದಿಸುತ್ತಾರೆ ಎಂಬ ಭರವಸೆ ಇದೆ. ಸರ್ಕಾರಕ್ಕೆ ಮಾರ್ಗದರ್ಶನ ನೀಡುತ್ತಾರೆ ಎಂಬ ಆಶಾದಾಯಕದಿಂದಲೇ ಮನವಿ ಮಾಡಿದ್ದೇವೆ. ಇಲ್ಲದಿದ್ದರೆ ನಾವು ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ರಾಜಭವನದ ಬಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Share Post