ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಸಿದ್ದರಾಮಯ್ಯ ನಿಲುವಳಿ ಸೂಚನೆ ಮಂಡನೆ
ಬೆಂಗಳೂರು: ರಾಷ್ಟ್ರಧ್ವಜದ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ನಿಲುವಳಿ ಸೂಚನೆ ಮಂಡನೆ ಮಾಡಿದ್ದಾರೆ. ವಿಧಾನಪರಿಷತ್‌ನಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ. ನಿಯಮ 59ರ ಅಡಿಯಲ್ಲಿ ಚರ್ಚೆಗೆ ಕೈ ನಾಯಕರು ಸಮಯ ಕೇಳಿದ್ದಾರೆ. ಕೆ.ಎಸ್.ಈಶ್ವರಪ್ಪನವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಈಶ್ವರಪ್ಪ ವಿರುದ್ಧ ನಿಯಮ 60 ಅಡಿಯಲ್ಲಿ ನೊಟೀಸ್ ನೀಡಿದ್ದಾರೆ. ವಿಧಾನಸಭಾ ಕಾರ್ಯದರ್ಶಿಗೆ ಸಿದ್ದರಾಮಯ್ಯ ನಿಲುವಳಿ ನೊಟೀಸ್ ನೀಡಿದ್ದಾರೆ. ನಾಳೆ ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ ಹೊರಡಿಸಿದ್ದಾರೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜವನ್ನು ಇಳಿಸಿ ಕೇಸರಿ ಬಾವುಟವನ್ನು ಹಾರಿಸಿದ್ದರು. ಈ ವಿಚಾರವಾಗಿ ಸಚಿವ ಈಶ್ವರಪ್ಪ ಮಾತನಾಡಿ ಮುಂದೊಂದು ದಿನ ದೇಶದಲ್ಲಿ ಕೇಸರಿ ಬಾವುಟ ಹಾರುತ್ತದೆ ಎಂಬ ಹೇಳಿಕೆಯನ್ನು ನೀಡಿದ್ರು. ಇದು ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನ, ಅವಹೇಳನಕಾರಿ ಹೇಳಿಕೆ ಎಂದು ಕಾಂಗ್ರೆಸ್ ನಾಯಕರು ಕಿಡಿ ಕಾರಿದ್ದಾರೆ.