BengaluruCrime

ರೋಹಿಣಿ ಸಿಂಧೂರಿ ವಿರುದ್ಧ ಗಾಯಕನ ಗಂಭೀರ ಆರೋಪ; ಜಾಗ ಒತ್ತುವರಿಯಾಯ್ತಾ..?

ಬೆಂಗಳೂರು; ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ.. ಖ್ಯಾತ ಬಾಲಿವುಡ್‌ ಗಾಯಕ ಲಕ್ಕಿ ಅಲಿ ಅವರು ಈ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.. ಟ್ರಸ್ಟ್‌ ಒಂದಕ್ಕೆ ಸೇರಿದ ಜಾಗವನ್ನು ಕಬಳಿಸಿದ್ದಾರೆ ಎಂದು ಆರೋಪಿಸಲಾಗಿದೆ..

ಬೆಂಗಳೂರಿನ ಯಲಹಂಕ ನ್ಯೂಟೌನ್‌ ಬಳಿ ಇರುವ ಟ್ರಸ್ಟ್‌ ಒಂದಕ್ಕೆ ಸೇರಿರುವ ಜಾಗವನ್ನು  ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿ ಎಂಬುವವರು ಒತ್ತುವರಿ ಮಾಡಿಕೊಂಡಿದ್ದಾರೆ.. ರೋಹಿಣಿ ಸಿಂಧೂರಿಯವರು ಸಹಕಾರ ಕೊಟ್ಟಿದ್ದಾರೆ.. ಇದಕ್ಕಾಗಿ ಅವರು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಗಾಯಕ ಲಕ್ಕಿ ಅಲಿ ಆರೋಪ ಮಾಡಿದ್ದಾರೆ.. ಈ ಕುರಿತು ಅವರು ಟ್ವೀಟ್‌ ಕೂಡಾ ಮಾಡಿದ್ದಾರೆ.

ಪ್ರಕರಣದಲ್ಲಿ ಯಲಹಂಕ ನ್ಯೂ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿ ಮನೋಹನ್ ಕೂಡಾ ಶಾಮೀಲಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ..

Share Post