BengaluruPolitics

ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರಗಾರಿಕೆ; ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು; ಸಿಂಗಾಪುರದಲ್ಲಿ ಕುಳಿತು ನಮ್ಮ ಸರ್ಕಾರವನ್ನು ಬೀಳಿಸುವ ತಂತ್ರಗಾರಿಕೆ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬೀಳಿಸಲು ಸರ್ಕಸ್‌ ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪರೋಕ್ಷ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕುಳಿತು ಆಪರೇಷನ್‌ ಮಾಡಿದ್ದರೆ ಗೊತ್ತಾಗ್ತಿತ್ತು. ಅದು ಬಿಟ್ಟು ವಿದೇಶದಲ್ಲಿ ಕುಳಿತು ಅವರೇನೋ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇನ್ನು ಮಾಜಿ ಸಚಿವ ಮುನಿರತ್ನ ಅವರು ಹನಿಟ್ರ್ಯಾಪ್‌ ಮಾಡಿಸಿದ ಬಗ್ಗೆ ನನಗೆ ಗೊತ್ತಿಲ್ಲ. ಯಾರು ಹಾಗೆ ಹೇಳಿದ್ದಾರೋ ಅವರನ್ನೇ ಕೇಳಿ ಎಂದು ಪ್ರಶ್ನೆಯೊಂದಕ್ಕೆ ಡಿ.ಕೆ.ಶಿವಕುಮಾರ್‌ ಉತ್ತರಿಸಿದರು.

Share Post