BengaluruHealth

ಎಸ್‌.ಎಂ.ಕೃಷ್ಣ ಆರೋಗ್ಯ ಸ್ಥಿರವಾಗಿದೆ; ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶ್ವಾಸಕೋಶ ಸಮಸ್ಯೆ ಹಿನ್ನೆಲೆಯಲ್ಲಿ ಎಸ್‌.ಎಂ.ಕೃಷ್ಣ ಅವರು ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಚಿಕಿತ್ಸೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.

ಎಸ್‌.ಎಂ.ಕೃಷ್ಣ ಅವರು ನಿನ್ನೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ಅವರು ಆರೋಗ್ಯದಲ್ಲಿ ಚೇತರಿಕೆ ಕಂಡಿರುವುದರಿಂದ ಎರಡು ಮೂರು ದಿನದಲ್ಲಿ ಅವರನ್ನು ವಾರ್ಡ್‌ಗೆ ಶಿಫ್ಟ್‌ ಮಾಡಲಾಗುತ್ತದೆ ಎಂದು ಸುಧಾಕರ್‌ ಹೇಳಿದ್ದಾರೆ.

Share Post