BengaluruPolitics

ಸಂಸತ್‌ ಭವನದಲ್ಲಿ ಸ್ಮೋಕ್‌ ದಾಳಿ ವಿಚಾರ; ಪ್ರತಾಪ ಸಿಂಹ ವಿರುದ್ಧ ಪ್ರತಿಭಟನೆ

ಬೆಂಗಳೂರು; ಸಂಸತ್‌ನಲ್ಲಿ ನಿನ್ನೆ ಪ್ರತಾಪ ಸಿಂಹ ಅವರ ಕಚೇರಿಯಿಂದ ಪಾಸ್‌ ಪಡೆದಿದ್ದ ಇಬ್ಬರು ಯುವಕರು ಕಲಾಪಕ್ಕೆ ನುಗ್ಗಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಸಂಸದ ಪ್ರತಾಪ ಸಿಂಹ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಕಾರ್ಯಕರ್ತರು, ಸಂಸದ ಪ್ರತಾಪ ಸಿಂಹ ಅಮಾನತಿಗೆ ಆಗ್ರಹಿಸಿದ್ದಾರೆ. ಜೊತೆಗೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಪ್ರತಾಪ್ ಸಿಂಹ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಾಪ್‌ ಸಿಂಹ ಅವರ ಪೋಸ್ಟರ್‌ಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಬೇಕೆಂದು ಆಗ್ರಹಿಸಲಾಯಿತು.

 

Share Post