ಇಡಿಯಿಂದ ಸೋನಿಯಾ ವಿಚಾರಣೆ; ಕಾಂಗ್ರೆಸ್ನಿಂದ ರಾಜ್ಯಾದ್ಯಂತ ಪ್ರತಿಭಟನೆ
ಬೆಂಗಳೂರು; ಇಡಿ ವಿಚಾರಣೆ ನೆಪದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಇವತ್ತೂ ಕೂಡಾ ಪ್ರತಿಭಟನೆ ಮುಂದುವರೆಸಿದೆ. ನಿನ್ನೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರು ಇಂದು ರಾಜ್ಯದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಆಯಾ ಭಾಗದ ಮುಖಂಡರು, ಶಾಸಕರು ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು. ಕೆಲವೆಡೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.
ಸೋನಿಯಾಗಾಂಧಿಯವರು ನಿನ್ನೆ ಮೂರು ಗಂಟೆಗಳ ಕಾಲ ಇಡಿ ವಿಚಾರಣೆ ಎದುರಿಸಿದ್ದರು. ಮತ್ತೆ ಜುಲೈ 25ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೋನಿಯಾಗಾಂಧಿಯವರಿಗೆ ಸೂಚನೆ ನೀಡಲಾಗಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದಿದ್ದಾರೆ.