Bengaluru

SPEAKER MEETING: ಕಾಂಗ್ರೆಸ್‌ ಪ್ರತಿಭಟನೆ- ಸ್ಪೀಕರ್‌ ನೇತೃತ್ವದಲ್ಲಿ ಸಂಧಾನ ಸಭೆ

ಬೆಂಗಳೂರು: ರಾಷ್ಟ್ರಧ್ವಜ ಕುರಿತು ಸಚಿವ ಈಶ್ವರಪ್ಪ ಹೇಳಿಕೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಸದನ ನಡೆಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನಸಭಾ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಸಂಧಾನಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ಜೊತೆ ಸಂಧಾನ ಸಭೆ ನಡೆಸುತ್ತಿದ್ದಾರೆ.

ಸ್ಪೀಕರ್‌ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ. ಸದನ ಮುಂದುವರೆಸಬೇಕೋ ಬೇಡವೋ ಎಂಬುದರ ಕುರಿತು ಚರ್ಚೆ ನಡೆಸಲಾಗುತ್ತಿದೆ.

 

Share Post