ಜನಾರ್ದನರೆಡ್ಡಿಯ 77 ಆಸ್ತಿ ಜಪ್ತಿಗೆ ಸಿಬಿಐ ವಿಶೇಷ ಕೋರ್ಟ್ ಆದೇಶ
ಬೆಂಗಳೂರು; ಶಾಸಕ ಜನಾರ್ದನರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಅವರ ಆಸ್ತಿ ಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಅವರ ವಿರುದ್ಧ ಕೇಸ್‌ಗಳ ವಿಚಾರಣೆ ಮುಗಿಯುವವರೆಗೂ ಜನಾರ್ದನರೆಡ್ಡಿ ಹಾಗೂ ಲಕ್ಷ್ಮೀ ಅರುಣ ಅವರಿಗೆ ಸೇರಿದ 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸೂಚಿಸಲಾಗಿದೆ. ಸಿಬಿಐ ಅಧಿಕಾರಿಗಳು ಜನಾರ್ದನರೆಡ್ಡಿ ಗಾಗೂ ಪತ್ನಿ ಲಕ್ಷ್ಮೀ ಅರುಣ ಅವರಿಗೆ ಸೇರಿದ 124 ಆಸ್ತಿಗಳನ್ನು ಜಪ್ತಿ ಮಾಡಲು ಅವಕಾಶ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸಿರುವ ಕೋರ್ಟ್, ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸೂಚನೆ ಕೊಟ್ಟಿದೆ.
ಇದೇ ಜನವರಿ 12 ರಂದು ಶಾಸಕ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿತ್ತು.