Bengaluru

ಸಮಾಜ ಕಲ್ಯಾಣ ಸಚಿವರಿಗೆ ಕೊರೊನಾ ದೃಢ: ಎಚ್ಚರವಾಗಿರುವಂತೆ ಸೂಚನೆ

ಬೆಂಗಳೂರು: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟ್ಟರ್‌ ಕಾತೆಯಲ್ಲಿ ಪೋಸ್ಟ್‌ ಮಾಡಿಕೊಂಡಿರುವ ಸಚಿವರು ʻನನಗಿರುವ ಜ್ವರದ ಲಕ್ಷಣದಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೋವಿಡ್ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳಲು ಮನವಿ ಮಾಡಿದ್ದಾರೆ.

ಕೋವಿಡ್‌ ಹಿನ್ನೆಲೆ ಸಚಿವರು ಮನೆಯಲ್ಲಿಯೇ ಐಸೋಲೇಟ್‌ ಅಗಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ಎಚ್ಚರವಾಗಿರುವಂತೆ ಸೂಚನೆ ನೀಡಿದ್ದಾರೆ. ಕಾಲ ಕಾಲಕ್ಕೆ ವೈದ್ಯರ ಸಲಹೆ ಪಡೆದು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆಯನ್ನು ನೀಡಿದ್ದಾರೆ.

Share Post