ಎಸ್‌ಎಸ್‌ಎಲ್‌ಸಿ, ಪಿಯು ಮಂಡಳಿ ವಿಲೀನ; ಸಂಪುಟ ಸಭೆ ಅಸ್ತು
ಬೆಂಗಳೂರು; ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಮಂಡಳಿಗಳನ್ನು ವಿಲೀನಗೊಳಿಸಿ ಒಂದೇ ಮಂಡಳಿಯಡಿ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಕುರಿತ ವಿದೇಯಕ ಮಂಡನೆಗೆ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು ಅಥವಾ ನಾಳೆ ಸದನದಲ್ಲಿ ವಿಧೇಯಕ ಮಂಡಿಸುವ ಸಾಧ್ಯತೆ ಇದೆ.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಾಯ್ದೆ 1966 ತಿದ್ದುಪಡಿ ಮಸೂದೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದ್ದು, ಎನ್‌ಇಪಿ 2020 ಅನ್ವಯ ಬೋರ್ಡ್ ವಿಲೀನಕ್ಕೆ ಸರ್ಕಾರ ನಿರ್ಧಾರ ಮಾಡಿದೆ. ವಿಧಾನ ಮಂಡಲದಲ್ಲಿ ಹೊಸ ಕಾಯ್ದೆಗೆ ಒಪ್ಪಿಗೆ ಸಿಕ್ಕ ಮೇಲೆ ಎರಡೂ ಬೋರ್ಡ್ ವಿಲೀನ ಆಗಲಿದೆ. ಬಳಿಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಂದು ಮರು ನಾಮಕರಣ ಮಾಡಲಾಗುತ್ತದೆಂದು ತಿಳಿದುಬಂದಿದೆ.