Bengaluru

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟ; 8.69 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು; ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಪ್ರತಿ ಬಾರಿ ಶಿಕ್ಷಣ ಸಚಿವರು ಫಲಿತಾಂಶ ಪ್ರಕಟ ಮಾಡುತ್ತಿದ್ದರು. ಈ ಬಾರಿ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಅಧಿಕಾರಿಗಳು ಫಲಿತಾಂಶವನ್ನು ಪ್ರಕಟ ಮಾಡಲಿದ್ದಾರೆ. ನಾಳೆ ಬೆಳಗ್ಗೆ ಹತ್ತು ಗಂಟೆಗೆ ಫಲಿತಾಮಶ ಪ್ರಕಟವಾಗಲಿದ್ದು. ಹನ್ನೊಂದು ಗಂಟೆಯ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು http://karresults.nic.in ನಲ್ಲಿ ವೀಕ್ಷಿಸಬಹುದು ಎಂದು ತಿಳಿಸಿದೆ. ಈ ವೆಬ್‌ಸೈಟ್‌ನಲ್ಲಿ ರೋಲ್‌ ನಂಬರ್‌ ಎಂಟರ್‌ ಮಾಡುವುದರ ಮೂಲಕ ಫಲಿತಾಂಶ ಪಡೆದುಕೊಳ್ಳಬಹುದು. ಸುಮಾರು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾರ್ಚ್‌ 31ರಿಂದ ಏಪ್ರಿಲ್‌ 15ರವರೆಗೆ ಪರೀಕ್ಷೆ ನಡೆದಿತ್ತು.

Share Post