ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ.85.63ರಷ್ಟು ರಿಸಲ್ಟ್
ಬೆಂಗಳೂರು: 2021–22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಶೇಕಡಾ 85.63ರಷ್ಟು ಫಲಿತಾಂಶ ಬಂದಿದ್ದು, 7.38 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಒಟ್ಟು 8.53 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದ್ರಲ್ಲಿ 7.38 ಲಕ್ಷ ವಿದ್ಯಾರ್ಥಿಗಳು ಕಾಲೇಜು ಮೆಟ್ಟಿಲು ಹತ್ತಲು ಅರ್ಹರಾಗಿದ್ದಾರೆ. 145 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. 227 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಿತು. 52,219 ಮೌಲ್ಯಮಾಪಕರು ಉತ್ತರಪತ್ರಿಕೆಗಳ ಮೌಲ್ಯಮಾಪನ ಮಾಡಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು..
ವಿದ್ಯಾರ್ಥಿಗಳು ಫಲಿತಾಂಶವನ್ನು ಈ ವೆಬ್ ಸೈಟ್‌ಗಳ ಮೂಲಕ ನೋಡಬಹುದು. 1) https://karresults.nic.in/ 2) www.kseeb.kar.nic.in