BengaluruEconomy

ರಾಜ್ಯ ಬಜೆಟ್‌; ರೈತರಿಗೆ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ

2023-24 ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆಯಾಗಿದ್ದು, ರೈತರಿಗೆ ಹತ್ತು ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಅದರ ವಿವರ ಇಲ್ಲಿದೆ.

ರೈತರಿಗೆ ಐದು ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ
50 ಲಕ್ಷ ರೈತರಿಗೆ ಭೂ ಸಿರಿ ಯೋಜನೆಯಿಂದ ಅನುಕೂಲ
ಕಿರುಧಾನ್ಯ ಬೆಳೆಗಾರರಿಗೆ 10 ಸಾವಿರ ರೂ. ಪ್ರೋತ್ಸಾಹ ಧನ
ಮದಹಾಯಿ ಯೋಜನೆಗೆ ಸಾವಿರ ಕೋಟಿ ರೂಪಾಯಿ
ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ ಹತ್ತು ಕೋಟಿ
38 ಕುಡಿಯುವ ನೀರಿನ ಯೋಜನೆಗಳಿಗೆ ಅನುದಾನ
ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ರೈತರಿಗೆ ಸಹಾಯ
ರಾಜ್ಯದ 30 ಲಕ್ಷ ರೈತರಿಗೆ 25 ಸಾವಿರ ಕೋಟಿ ಸಾಲ
ರೈತರ ಬಡ್ಡಿ ರಹಿತ ಸಾಲ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ
ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ ಮತ್ತು ರಫ್ತಿಗೆ ಒತ್ತು

ಪಿಎಂ ಶ್ರೀ ಯೋಜನೆ ಅಡಿಯಲ್ಲಿ ರೈತರಿಗಾಗಿ 100 ಕೋಟಿ ಮೀಸಲು

ಕಳಸಾ ಬಂಡೂರಿ ನಾಲೆ ವಿಸ್ತರಣೆಗೆ 1,000 ಕೋಟಿ ರೂ.

ಮೀನುಗಾರಿಕೆ ಉತ್ತೇಜನಕ್ಕೆ ಸೀ ಫುಡ್ ಪಾರ್ಕ್

ಸೀಮೆ ಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಪರಿವರ್ತಿಸಲು​ 40 ಕೋಟಿ ರೂ. ಮೀಸಲು

ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆಗೆ 90 ಕೋಟಿ ರೂ. ಅನುದಾನ

ಬಳ್ಳಾರಿ ಜಿಲ್ಲೆಯಲ್ಲಿ ದಿನಂಪ್ರತಿ 2 ಲಕ್ಷ ಲೀಟರ್ ಹಾಲು ಸಂಸ್ಕರಣಾ ಸಾಮರ್ಥ್ಯದ ಮೆಗಾಡೈರಿ

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 20,000 ಫಲಾನುಭವಿಗಳಿಗೆ 355 ಕೋಟಿ ರೂ. ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ

290 ಸಂಚಾರಿ ಪಶುಚಿಕಿತ್ಸಾಲಯಗಳ ಪ್ರಾರಂಭ

Share Post