ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್; ಸಿಎಂ ಬೊಮ್ಮಾಯಿ
ಬೆಂಗಳೂರು: ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಫೆಬ್ರವರಿ 14 ರಿಂದ ಜಂಟಿ ಅಧಿವೇಶನ ನಡೆಸಲು ತೀರ್ಮಾನಿಸಿದ್ದೇನೆ ಎಂದರು.
ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸಿದ್ದೇವೆ. ದಿನಾಂಕವನ್ನು ಶೀಘ್ರದಲ್ಲೇ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.