BengaluruEconomy

ರಾಜ್ಯ ಬಜೆಟ್‌; ಗೃಹಿಣಿಯರಿಗೆ ತಿಂಗಳಿಗೆ 500 ರೂಪಾಯಿ

ಬೆಂಗಳೂರು; ಈ ಬಾರಿ ಕಾಂಗ್ರೆಸ್‌ ಗೆದ್ದರೆ ಗೃಹ ಲಕ್ಷ್ಮೀ ಯೋಜನೆ ಜಾರಿಗೆ ತರಲಾಗುವುದು. ಪ್ರತಿ ಮನೆಗ ಗೃಹಿಣಿಗೆ ತಿಂಗಳಿಗೆ 2 ಸಾವಿರ ರೂಪಾಯಿ ಸಹಾಯ ಧನ ನೀಡಲಾಗುತ್ತೆ ಅಂತ ಕಾಂಗ್ರೆಸ್‌ ಭರವಸೆ ನೀಡಿದೆ. ಆದ್ರೆ ರಾಜ್ಯ ಬಿಜೆಪಿ ಸರ್ಕಾರ ಇದೇ ತರದ ಯೋಜನೆಯನ್ನು ಈ ಬಜೆಟ್‌ನಲ್ಲಿ ಘೋಷಣೆ ಮಾಡಿದೆ. ಗೃಹ ಶಕ್ತಿ ಯೋಜನೆ ಮೂಲಕ ಗೃಹಿಣಿಯರಿಗೆ ತಿಂಗಳಿಗೆ 500 ರೂಪಾಯಿ ಸಹಾಯ ಧನ ನೀಡೋದಾಗಿ ಹೇಳಿದೆ.

– ಗೃಹಿಣಿ ಶಕ್ತಿ ಯೋಜನೆ ಘೋಷಣೆ. ಗೃಹಿಣಿಯರಿಗೆ ತಿಂಗಳಿಗೆ 500 ಸಹಾಯ ಧನ
– ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ಬದಲು 10 ಸಾವಿರ ಮಾಸಾಶನ
– ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ವಿಭಜನೆ
– ಮಕ್ಕಳ ಪೌಷ್ಟಿಕತೆ ಹಾಗೂ ಮಹಿಳೆಯರ ಸಬಲೀಕರಣಕ್ಕೆ ಪ್ರತ್ಯೇಕ ಇಲಾಖೆಗಳನ್ನು ಸ್ಥಾಪಿಸಲು ಕ್ರಮ
– ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ She Toilet ನಿರ್ಮಾಣ
– ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಹಾಯಧನ 1000 ರೂ. ನಿಂದ 1500 ರೂ.ಗೆ ಏರಿಕೆ

-ಮಹಿಳಾ ಉದ್ಯಮಿದಾರರಿಗೆ 2 ಕೋಟಿ ರೂ. ತನಕ ಸಾಲ ಸೌಲಭ್ಯ
-1 ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ

Share Post