ಮೂರು ನಿಗಮ ವಿಲೀನಕ್ಕೆ ಸಂಪುಟ ಅಸ್ತು; 166 ಕೈದಿಗಳ ಬಿಡುಗಡೆಗೆ ತೀರ್ಮಾನ
ಬೆಂಗಳೂರು; ಅರಣ್ಯಕ್ಕೆ ಸಂಬಂಧಿಸಿದ ಮೂರು ನಿಗಮಗಳನ್ನು ವಿಲೀನಗೊಳಿಸಿ ಒಂದೇ ನಿಗಮ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಂಪುಟದ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಅವರು, ಅರಣ್ಯ ಅಭಿವೃದ್ಧಿ ನಿಗಮ , ಅರಣ್ಯ ಕೈಗಾರಿಕಾ ನಿಗಮ ಹಾಗೂ ಗೇರು ಅಭಿವೃದ್ಧಿ ನಿಗಮಗಳನ್ನು ವಿಲೀನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
ಲೋಕಾಯುಕ್ತದಲ್ಲಿ 3-4 ನಾಲ್ಕು ಸಿಬ್ಬಂದಿಯನ್ನು ಮುಂದುವರೆಸಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಇನ್ನು ಸನ್ನಡತೆ ಆಧಾರದ ಮೇಲೆ 166 ಕೈದಿಗಳನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸ್ವಾಮಿತ್ವ ಯೋಜನೆಗೆ 287 ಕೋಟಿ ರೂಪಾಯಿ ಹಾಗೂ ಚಾಮುಂಡೇಶ್ವರಿ ದೇವಸ್ಥಾನ ಮೂಲ ಸೌಕರ್ಯಕ್ಕೆ 92.81 ಕೋಟಿ ನೀಡಲು ಸಂಪುಟ ಒಪ್ಪಿಗೆ ನೀಡಿದೆ. ಇದಲ್ಲದೆ ಹಲವು ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಸಂಪುಟ ಅಸ್ತು ಎಂದಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.