BengaluruCrime

ಹೊಸ ವರ್ಷದ ದಿನವೇ ವಿದ್ಯಾರ್ಥಿನಿ ನೇಣಿಗೆ ಶರಣು; ಕಾರಣ ಏನು..?

ಬೆಂಗಳೂರು; ಹೊಸ ವರ್ಷಕ್ಕೆ ಕಾಲಿಡುತ್ತಿರುವ ದಿನವೇ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ 21 ವರ್ಷದ ವರ್ಷಿಣಿ ನೇಣಿಗೆ ಶರಣಾಗಿದ್ದಾಳೆ.

ವರ್ಷಣಿ ಸುಧಾಮನಗರದಲ್ಲಿ ಪೋಷಕರ ಜೊತೆ ವಾಸವಿದ್ದಳು. ರಾತ್ರಿ ಎಲ್ಲರೂ ಮಲಗಿದ ಮೇಲೆ ತನ್ನ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಕಾರಣ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ. ಯಾವುದೇ ಡೆತ್‌ನೋಟ್‌ ಕೂಡಾ ವರ್ಷಿಣಿ ಬರೆದಿಟ್ಟಿಲ್ಲ. ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತದೇಹವನ್ನು ಕಿಮ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ.

 

Share Post