Bengaluru

ಎಸ್‌ಡಿಪಿಐ-ಪಿಎಫ್‌ಐ ನಿಷೇಧ, ಗೃಹಸಚಿವ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು; ಎಸ್‌ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧ ಮಾಡಬೇಕು ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು, ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಜಯಮಹಲ್‌ನಲ್ಲಿರುವ ಗೃಹ ಸಚಿವರ ಮನೆಯ ಪ್ರವೇಶ ದ್ವಾರದಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಗೇಟ್ ತಳ್ಳಿ‌ ಒಳನುಗ್ಗಿದ ಕಾರ್ಯಕರ್ತರು ಗೃಹಸಚಿವರ ಮನೆಯ ಬಾಗಿಲು ಬಳಿ ಕುಳಿತು ಪ್ರತಿಭಟನೆ ಮುಂದುವರಿಸಿದರು. ಈ ವೇಳೆ ಎಬಿವಿಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಲಘು ಲಾಠಿ ಪ್ರಹಾರ ನಡೆಸಿದ ಪೊಲೀಸರು, ಕಾರ್ಯಕರ್ತರನ್ನು ಸ್ಥಳದಿಂದ ಚದುರಿಸಿದರು. 10ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದರು. ಸದ್ಯ ಗೃಹ ಸಚಿವರ ಮನೆ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

 

Share Post