ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ; ಆರೋಪಿ ಅರೆಸ್ಟ್
ಬೆಂಗಳೂರು; ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ ಇಟ್ಟು, ಖಾಸಗಿ ವಿಡಿಯೋಗಳನ್ನು ಚಿತ್ರೀಕರಿಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಬಂಧಿತನನ್ನು ಶುಭಂ ಎಂ ಆಜಾದ್ ಎಂದು ಗುರುತಿಸಲಾಗಿದೆ.
ಆರೋಪಿ ಇದೇ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಈತ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಎನ್ನಲಾಗಿದೆ. ಈತ 1200ಕ್ಕೂ ಅಧಿಕ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ ಎಂದು ಹೇಳಲಾಗಿದೆ. ಆರೋಪಿ ಇತ್ತೀಚೆಗೆ ಆರೋಪಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಕ್ಯಾಮರಾ ಅಳವಡಿಸುತ್ತಿದ್ದಾಗ ವಿದ್ಯಾರ್ಥಿನಿಯರು ನೋಡಿ ಕಿರುಚಿಕೊಂಡಿದ್ದಾರೆ. ಆಗ ಆರೋಪಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಬಳಿಕ ಸಿಸಿಟಿವಿ ಪರಿಶೀಲನೆ ಮಾಡಿದಾಗ ಆತನ ಕೃತ್ಯ ಬಯಲಾಗಿದೆ. ಕೂಡಲೇ ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.