BengaluruPolitics

ಸಿಎಂ ಸಿದ್ದರಾಮಯ್ಯಗೆ ವಿದ್ಯಾರ್ಥಿನಿಯಿಂದ ಪತ್ರ; ಮರುಪತ್ರ ಬರೆದು ಖುಷಿ ವ್ಯಕ್ತಪಡಿಸಿದ ಸಿದ್ದರಾಮಯ್ಯ

ಕೊಪ್ಪಳ; ವಿದ್ಯಾರ್ಥಿನಿಯೊಬ್ಬಳು ಸಿದ್ದರಾಮಯ್ಯ ಅವರು ಎರಡನೇ ಬಾರಿ ಸಿಎಂ ಆಗಿದ್ದಕ್ಕೆ ಅಭಿನಂದನೆ ಸಲ್ಲಿಸಿ ಪತ್ರ ಬರೆದಿದ್ದು, ಅದಕ್ಕೆ ಸಿಎಂ ಸಿದ್ದರಾಮಯ್ಯ ಸಂತೋಷ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರು ವಿದ್ಯಾರ್ಥಿನಿಗೆ ಪತ್ರ ಬರೆದು ಆಕೆಯ ಸಾಮಾಜಿಕ ಕಾಳಜಿಯನ್ನು ಕೊಂಡಾಡಿದ್ದಾರೆ.

ಕೊಪ್ಪಳ ನಗರದ ಮಾಸ್ತಿ ಪಬ್ಲಿಕ್‌ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಶ್ರೇಯಾಂಕಾ ವಿ.ಮೆಣಸಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಎರಡನೇ ಬಾರಿ ಸಿಎಂ ಆಗಿದ್ದಕ್ಕೆ ಅಭಿನಂದಿಸಿದ್ದಾಳೆ. ಇದೇ ವೇಳೆ ಮೊದಲ ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅನ್ನಭಾಗ್ಯ, ಶೂ ಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರು. ಇದೇ ರೀತಿಯಾಗಿ ಈ ಬಾರಿಯೂ ಉತ್ತಮ ಆಡಳಿತ ನೀಡಬೇಕೆಂದು ಅಭಿಲಾಷೆಯನ್ನೂ ಪತ್ರದಲ್ಲಿ ವ್ಯಕ್ತಪಡಿಸಿದ್ದಾಳೆ. ಇದರಿಂದ ಸಿದ್ದರಾಮಯ್ಯ ಸಂತಸಗೊಂಡು ಮರುಪತ್ರ ಬರೆದಿದ್ದಾಳೆ.

ವಿದ್ಯಾರ್ಥಿನಿಯ ಪತ್ರವನ್ನು ಓದಿ ಸಿದ್ದರಾಮಯ್ಯ ಖುಷಿಪಟ್ಟಿದ್ದಾರೆ. ನಂತರ ಆಕೆಗೆ ಪತ್ರ ಬರೆದಿದ್ದಾರೆ. ಪ್ರೀತಿಯ ಶ್ರೇಯಾಂಕಾ, ತಾವು ಬರೆದ ಅಭಿನಂದನಾ ಪತ್ರ ನನಗೆ ತಲುಪಿದೆ. 8ನೇ ತರಗತಿ ಓದುತ್ತಿರುವ ನಿನಗಿರುವ ಸಾಮಾಜಿಕ ಕಳಕಳಿ ಮೆಚ್ಚುವಂತಹದ್ದು. ಈ ಎಳೆಯ ವಯಸ್ಸಿನಲ್ಲಿ ಬಡವರು, ದೀನ-ದಲಿತರು, ರೈತರ ಬಗೆಗಿನ ನಿನ್ನ ಕಾಳಜಿ ಬೆರಗು ಮೂಡಿಸುವಂತಹದ್ದು. ಜೀವನದಲ್ಲಿ ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯೆ ಕಲಿತು, ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗು ಎಂದು ಹಾರೈಸಿ ಸಿಎಂ ಪತ್ರ ಬರೆದಿದ್ದಾರೆ.

Share Post