BengaluruCrime

ಪಾಗಲ್‌ ಪ್ರೇಮಿಯಿಂದ ಆಸಿಡ್‌ ದಾಳಿ ಪ್ರಕರಣ; ನಾಳೆ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು; ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರು ಯುವತಿ ಮೇಲಿನ ಆ್ಯಸಿಡ್ ದಾಳಿ ಪ್ರಕರಣದ ತನಿಖೆ ಮುಕ್ತಾಯಗೊಂಡಿದೆ. ಈ ಪ್ರಕರಣದ ಚಾರ್ಜ್ ಶೀಟ್‌ ರೆಡಿಯಾಗಿದ್ದು, ಪೊಲೀಸರು,  ನಾಳೆ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಮೂರು ತಿಂಗಳ ಸುದೀರ್ಘ ತನಿಖೆಯ ಬಳಿಕ ಪೊಲೀಸರು 13ನೇ ಎಸಿಎಂಎಂ ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. 770 ಪುಟಗಳ ಪ್ರಾಥಮಿಕ ಚಾರ್ಜ್ ಶೀಟ್ ಇದಾಗಿದ್ದು, 92 ಸಾಕ್ಷಿಗಳನ್ನು ಇದರಲ್ಲಿ ಉಲ್ಲೇಖಿಸಲಾಗಿದೆ.

   ಚಾರ್ಜ್‌ಶೀಟ್‌ ನಲ್ಲಿ ಇಬ್ಬರು ಪ್ರತ್ಯಕ್ಷದರ್ಶಿಗಳ 164 ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿ ಆ್ಯಸಿಡ್​ ನಾಗ ಯುವತಿ ಮೇಲೆ ಆ್ಯಸಿಡ್ ಎರಚಿದ ಮೇಲೆ ತನ್ನ ಸಹೋದರನಿಗೆ ಕರೆ ಮಾಡಿದ್ದ ಆಡಿಯೋ ಸೇರಿ ಹಲವು ವಾಯ್ಸ್ ರೆಕಾರ್ಡ್​ಗಳನ್ನು ಎಫ್​​ಎಸ್​ಎಲ್​ಗೆ ರವಾನೆ ಮಾಡಲಾಗಿತ್ತು. ಈಗ ಅದು ಆರೋಪಿ ನಾಗೇಶನ ಧ್ವನಿ ಎಂಬುದು ಖಚಿತವಾಗಿದೆ. ಈ ಹಿಂದೆ ನಾಗೇಶ್ ಹಾಗೂ ಸಂತ್ರಸ್ತೆಯ ಹೇಳಿಕೆಯಲ್ಲಿ ನೀಡಿರುವ ಅಂಶಗಳು ಚಾರ್ಜ್ ಶೀಟ್​ನಲ್ಲಿ ಉಲ್ಲೇಖವಾಗಿವೆ. ಸಾಕಷ್ಟು ಸಿಸಿಟಿವಿಗಳ ಸಾಕ್ಷಿಗಳನ್ನು ಸಹ ನಾಳೆ ಕೋರ್ಟ್​ಗೆ ಸಲ್ಲಿಸಲಾಗುತ್ತದೆ.

Share Post