ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ; ಆರೋಗ್ಯ ಸಚಿವರ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಜೊತೆಗೆ ಒಮಿಕ್ರಾನ್ ವೈರಾಣುವಿನ ಭೀತಿ ಕೂಡಾ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಸಂಬಂಧ ಇಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ. ಇದರಲ್ಲಿ ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಕೂಡಾ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು, ಒಮಿಕ್ರಾನ್ ರೂಪಾಂತರಿ ತಳಿ ಹರಡದಂತೆ ಹೇಗೆ ನೋಡಿಕೊಳ್ಳುವುದು ಎಂಬುದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ.