Bengaluru

ಕೊನೆಗೂ ಚಿತ್ರಮಂದಿರಗಳಿಗೆ ರಿಲೀಫ್‌; ನಾಳೆಯಿಂದಲೇ 100 ಪರ್ಸೆಂಟ್‌ ಭರ್ತಿ

ಬೆಂಗಳೂರು: ಕೊನೆಗೂ ರಾಜ್ಯ ಸರ್ಕಾರ ಚಿತ್ರರಂಗದ ಮನವಿಗೆ ಸ್ಪಂದಿಸಿದೆ. ನಾಳೆಯಿಂದಲೇ ಚಿತ್ರಮಂದಿರಗಳು ಶೇ.100ರಷ್ಟು ಭರ್ತಿಗೆ ಅವಕಾಶ ನೀಡಿದೆ. ಇದರ ಜೊತೆಗೆ ಜಿಮ್‌, ಈಜುಕೊಳ ಸೇರಿದಂತೆ ಎಲ್ಲಾ ಕಡೆ 50-50 ನಿಯಮಗಳನ್ನು ಹಿಂಪಡೆಯಲಾಗಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಚಿತ್ರಮಂದಿರಗಳಿಗೆ ವಿಧಿಸಿದ್ದ ನಿರ್ಬಂಧ ಹಿಂಪಡೆಯಲಾಗಿದೆ. ಕೊರೊನಾ ಕಡಿಮೆಯಾಗಿರುವುದರಿಂದ ಎಲ್ಲಾ ನಿರ್ಬಂಧ ಹಾಗೂ ಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದರು. ಆದ್ರೆ ಸರ್ಕಾರ ಮಾರ್ಗಸೂಚಿ ಪಾಲಿಸುವುದು ಕಡ್ಡಾಯ ಎಂದು ಅವರು ಹೇಳಿದ್ದಾರೆ.

 

Share Post